New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Monday 19 February 2018

744 hours reamaining to SSLC Examination....

ಇಂದು(19/2/2017) ಡಾ| ಅಂಬೇಡ್ಕರ್ ಭವನ ಕುಕ್ಕೇಡಿ, ಬೆಳ್ತಂಗಡಿ ತಾಲೂಕು ಇಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ ಮತ್ತು ದಲಿತ ವಿದ್ಯಾರ್ಥಿ ಒಕ್ಕೂಟ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ವಿಜ್ಞಾನ ವಿಷಯಕ್ಕೆ ಯೋಗೀಶ್, ಸ.ಪ್ರೌ.ಶಾಲೆ ಗುರುವಾಯನ ಕೆರೆ ಹಾಗೂ ಇಂಗ್ಲೀಷ್ ವಿಷಯಕ್ಕೆ ಶ್ರೀ ಜಗನ್ನಾಥ್ ಮುಖ್ಯ ಶಿಕ್ಷಕರು, ಸ.ಪ್ರೌ.ಶಾಲೆ ಗುರುವಾಯನ ಕೆರೆ ಭಾಗವಹಿಸಿದ್ದರು. ಶ್ರೀ ರಿಯಾಝ್ ಕೊಕ್ರಾಡಿ ಕಾರ್ಯಕ್ರಮವನ್ನು ನಿರೂಪಿಸಿದ್ದರು. ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಶೇಖರ ಕುಕ್ಕೇಡಿ ವಹಿಸಿದ್ದರು. ಸಮಾರಂಭವನ್ನು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಿವ್ಯಾಜ್ಯೋತಿ ವಹಿಸಿದ್ದರು.















0 comments:

Post a Comment