ದಿನಾಂಕ 27/02/2018 ರಂದು ಉಳ್ಳಾಲ ಸಮೀಪ ತೊಕ್ಕೊಟ್ಟು ಯುನಿಟಿ ಹಾಲ್ ನಲ್ಲಿ ಎಸ್.ಎಸ್.ಎಲ್.ವಿದ್ಯಾರ್ಥಿಗಳಿಗೆ ಒಂದು ದಿನದ ಗಣಿತ ತರಬೇತಿ ಕಾರ್ಯಗಾರ ನಡೆಸಲಾಯಿತು. ಸುಮಾರು 1000 ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ| ಎಂ.ಆರ್ ರವಿ ಹಾಗೂ ವಿದ್ಯಾಂಗ ಉಪನಿರ್ದೇಶಕರಾದ ಶ್ರೀ ವೈ ಶಿವರಾಮಯ್ಯ ಭಾಗವಹಿಸಿದ್ದರು. ಶ್ರೀ ಶಾಹುಲ್ ಹಮೀದ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರು, ದ.ಕ.ಜಿಲ್ಲಾ ಪಮಚಾಯತ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಅಧ್ಯಕ್ಷರಾದ ಜ|ಅನ್ವರ್ ಹುಸೈನ್ ವಹಿಸಿದ್ದರು. ಕಾರ್ಯಕ್ರಮವನ್ನು ಸೆಂಟ್ರಲ್ ಕಮಿಟಿ ಉಳ್ಳಾಲ ಇವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದರು.




0 comments:
Post a Comment