New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Sunday 18 February 2018

Telecast from ANSSIRD Mysore for SSLC Students



ಆಬ್ದುಲ್ ನಝೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆ ಮೈಸೂರು(ANSSIRD) ಇಲ್ಲಿಂದ ಪ್ರಸಾರಗೊಂಡ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕ್ಷಣ. ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾನ್ಯ ಶ್ರೀ ರವಿ ಸರ್ ನೆರವೇರಿಸಿ ವಿದ್ಯಾರ್ಥಿಗಳಿಗೆ ಅನೇಕ ಮಾಹಿತಿಗಳನ್ನು ನೀಡಿದರು.. ಮಾನ್ಯ ದ.ಕ.ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರಾದ ಶ್ರೀ ಶಿವರಾಮಯ್ಯ ಇವರು ಸ್ವಾಗತ ಹಾಗೂ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊಫೆಸರ್ ಶ್ರೀ ವಿಶ್ವನಾಥ ಇವರು ಮಾನಸಿಕವಾಗಿ ಪರೀಕ್ಷೆ ಎದುರಿಸುವ ಕುರಿತು ಮಾತನಾಡಿದರು. ವಿಜ್ಞಾನ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಎಸ್. ಶಾಸ್ತ್ರಿ, ವಿಜ್ಞಾನ ಶಿಕ್ಷಕರು ಬದ್ರಿಯಾ ಪದವಿಪೂರ್ವ ಕಾಲೇಜು ಮಂಗಳೂರು ಇವರು ಉತ್ತಮ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಕನ್ನಡ ವಿಷಯ ಪರಿವೀಕ್ಷಕರಾದ ಶ್ರೀ ಶಮಂತ್ ಸರ್ ರವರು ಅದ್ಭುತವಾಗಿ ನಡೆಸಿಕೊಟ್ಟರು. ಈ ಹಂತದಲ್ಲಿ ರಾಜ್ಯದ ಅನೇಕ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿದರು. ಮುಂದಿನ ಪ್ರಸಾರ ದಿನಾಂಕ 3/3/2018ರಂದು ನಡೆಯಲಿದೆ.ಎರಡನೇ ಚಿತ್ರವು ಗೋಕಾಕ್ ನಲ್ಲಿ ವಿದ್ಯಾರ್ಥಿಗಳು TV ವೀಕ್ಷಣೆ ಮಾಡುವ ಸಂದರ್ಭ.






0 comments:

Post a Comment